ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲ್ಯ ವಿವಾಹ ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ದುರದೃಷ್ಟಕರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಮಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂಬುದು ಜವಾಬ್ದಾರಿ ಸ್ಥಾನವಾದ ಮಹಿಳಾ ಮಂತ್ರಿಯಾಗಿ ಹೇಳುವುದು ತಲೆ ತಗ್ಗಿಸುವ ವಿಚಾರ ಎಂದು ಬೇಸರ ವ್ಯಕ್ತಪಡಿಸಿದರು.
ಈ ನಿಟ್ಟಿನಲ್ಲಿ ನಮ್ಮ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ನಮ್ಮ ಇಲಾಖೆ ಒಂದೇ ದಾರಿ ಎಂದು ನಾನು ಹೇಳಲಾರೆ. ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯಿತಿಗಳು, ಪ್ರಾಥಮಿಕ ಶಾಲೆಗಳ ಎಸ್‌ಡಿಎಂಸಿಗಳು, ಕಾನೂನು ಇಲಾಖೆಗಳು, ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳ ಸಹಕಾರವೂ ಅಗತ್ಯವಿದೆ. ಎಲ್ಲರೂ ಸಹಕರಿಸಿದರೆ ಈ ಬಾಲ್ಯ ವಿವಾಹ ತಡೆಯಬಹುದು ಎಂದು ಮನವಿ ಮಾಡಿದ್ದಾರೆ.