ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಅಂಗಾಂಗ ದಾನ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಂಗಾಂಗ ದಾನದಲ್ಲಿ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

2023ರಲ್ಲಿ ಅಂಗಾಂಗ ದಾನದಲ್ಲಿ ಕರ್ನಾಟಕ ಎರಡನೇ ಅತ್ಯುತ್ತಮ ರಾಜ್ಯ ಎಂಬ ಹೆಗ್ಗಳಿಕೆ ಪಡೆದಿದ್ದು ಕೇಂದ್ರ ಸರ್ಕಾರ ಈ ಪ್ರಶಸ್ತಿಯನ್ನು ಘೋಷಿಸಿತ್ತು. ರಾಜ್ಯದಲ್ಲಿ 178 ಜನ ಅಂಗಾಂಗ ದಾನ ಮಾಡಿದ್ದಾರೆ. ಅಂಗಾಂಗ ದಾನ ಕಾರ್ಯಕ್ರಮದಲ್ಲಿ ಕರ್ನಾಟಕ ಗಮನಾರ್ಹ ಸಾಧನೆ ಮಾಡಿದೆ. ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಬಳ್ಳಾರಿ ಜಿಲ್ಲೆ ಅತಿ ಹೆಚ್ಚು ಅಂಗಾಂಗ ದಾನಕ್ಕೆ ವಾಗ್ದಾನ ಮಾಡಿರುವ ಜಿಲ್ಲೆಯಾಗಿದೆ.

ಅಂಗಾಂಗ ದಾನವನ್ನು ಮತ್ತಷ್ಟು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರನ್ನು ಗೌರವಿಸಲು ಆದೇಶ ಹೊರಡಿಸಿದೆ. ಜೊತೆಗೆ ಹೊಸ ನಿರ್ದೇಶನದ ಪ್ರಕಾರ, ಈ ವರ್ಷ ಜನವರಿ 26 ರಿಂದ ಆಗಸ್ಟ್ 14 ರವರೆಗೆ ಅಂಗಾಂಗ ದಾನ ಮಾಡಿದವರಿಗೆ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಿಸಲು ಸರ್ಕಾರ ಮುಂದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here