ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಎಸ್ಟಿ ವಿಷಯದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ಗಣರಾಜ್ಯ ದಿನದ ಸಂದರ್ಭದಲ್ಲಿ, ಅವರು 30 ನಿಮಿಷಗಳ ಭಾಷಣ ಮಾಡಿದರು ಮತ್ತು 24 ಪುಟಗಳ ಭಾಷಣ ಓದುವ ಮೂಲಕ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ಸಂದೇಶ ನೀಡಿದರು.
ಪ್ರಮುಖವಾಗಿ ಗ್ಯಾರಂಟಿ ಯೋಜನೆ ಸರ್ಕಾರದ ಸಾಧನೆ. ಗ್ಯಾರಂಟಿ ಯೋಜನೆಯ ಹೊರತಾಗಿಯೂ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ ಎಂದು ತಿಳಿಸಿದರು.
ಕಾನೂನು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದು ವಿಪಕ್ಷಗಳಿಗೆ ರಾಜ್ಯಪಾಲರ ಭಾಷಣದ ಮೂಲಕ ಸರ್ಕಾರ ತಿರುಗೇಟು ನೀಡಿದೆ. ಅಲ್ಲದೇ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಯಾವೆಲ್ಲ ಅಭಿವೃದ್ಧಿ ಕೆಲಸ, ಅಭಿವೃದ್ಧಿ ಯೋಜನೆಗಳು ಜಾರಿ ಮಾಡಲಾಗಿದೆ ಎಂದು ಅಂಕಿಅಂಶಗಳ ಸಮೇತ ಸರ್ಕಾರ ತನ್ನ ಸಾಧನೆಯನ್ನು ಬಿಚ್ಚಿಟ್ಟಿದೆ ಎಂದು ತಿಳಿಸಿದರು.