ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಭಿಮಾನಿಗಳ ಆರಾಧ್ಯ ದೈವ ಪುನೀತ್ ರಾಜ್ಕುಮಾರ್ಗೆ 50ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ‘ಪವರ್ ಸ್ಟಾರ್’ ಇವತ್ತು ನಮ್ಮೊಂದಿಗೆ ಇದ್ದಿದ್ದರೆ ಅದ್ದೂರಿಯಾಗಿ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿತ್ತು. ಈಗ ಅವರಿಲ್ಲದೇ ಜನ್ಮದಿನ ಆಚರಿಸುವಂತಾಗಿದೆ.
ಪ್ರತಿ ವರ್ಷ ಮಾರ್ಚ್ 17 ಬಂತೆಂದರೆ ಅಭಿಮಾನಿಗಳು ಪುನೀತ್ ರಾಜ್ಕುಮಾರ್ ಬರ್ತ್ಡೇ ಪ್ರಯುಕ್ತ ಹಲವಾರು ಬಗೆಯ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತದೆ. ಅನ್ನದಾನ, ರಕ್ತದಾನ, ನೇತ್ರದಾನ ನೋಂದಣಿ ಸೇರಿದಂತೆ ಅನೇಕ ಬಗೆಯ ಕಾರ್ಯಗಳನ್ನು ಮಾಡಲಾಗುತ್ತದೆ.
ಬಾಲನಟನಾಗಿಯೇ ಅಭಿಮಾನಿಗಳ ಮನಗೆದ್ದ ಅವರು ಹೀರೋ ಆಗಿ ಕೂಡ ಲಕ್ಷಾಂತರ ಅಭಿಮಾನಿಗಳ ಮನಸ್ಸಿನಲ್ಲಿ ನೆಲೆನಿಂತರು.ಇಂದು ಜನ್ಮದಿನದ ಪ್ರಯುಕ್ತ ಅಭಿಮಾನಿಗಳು ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಡಾ. ರಾಜ್ಕುಮಾರ್ ಕುಟುಂಬದವರು ಕೂಡ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.