ಸೋಮವಾರದಿಂದ ಶಾಲೆ ಪುನಾರಂಭ: ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಭುಗೆಲೆದ್ದಿರುವ ಹಿಜಾಬ್‌ ವಿವಾದದ ನಡುವೆ ನಾಳೆ ಶಾಲೆಗಳು ಪುನಾರಾಂಭಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ನಿರ್ಲಕ್ಷಿಸುವಂತಿಲ್ಲ ಎಂದು ಪೊಲೀಸ್‌ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸರ್ಕಾರ ನಿರ್ದೇಶನ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಶಿಕ್ಷಣ ಸಚಿವ ಆರಗ ಜ್ಞಾನೇಂದ್ರ ಅವರು, ರಾಜ್ಯದಲ್ಲಿನ ಸೂಕ್ಷ್ಮ ವಲಯಗಳನ್ನು ಭೇಟಿ ನೀಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಎಸ್‌ ಪಿ ಮತ್ತು ಡಿಸಿಗಳಿಗೆ ಸೂಚಿಸಲಾಗಿದೆ ಎಂದರು.
ಈದೇ ವೇಳೆ ಶಾಲೆಗಳಿಗೆ ಭೇಟಿ ನೀಡಿ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು ಮತ್ತು ಆಡಳಿತ ಮಂಡಳಿಗಳ ಜತೆ ಸಂಪರ್ಕದಲ್ಲಿರಬೇಕೆಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಶಾಂತಿ, ಸೌಹಾರ್ದತೆಗೆ ಯಾವುದೇ ತೊಡಕು ಆಗದಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳು ಅಧ್ಯಯನ ನಡೆಸಲು ಮುಂದುವರಿಸಬೇಕು ಎಂದು ತಿಳಿಸಲಾಗಿದೆ.
ರಾಜ್ಯದಲ್ಲಿ ಹಿಜಾಬ್ ವಿವಾದದಿಂದ ಬಂದ್ ಆಗಿರುವ ಶಾಲೆಗಳನ್ನು ಮತ್ತೆ ತೆರೆಯುವಂತೆ ಹೈಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ 10ನೇ ತರಗತಿವರೆಗೆ ಶಾಲೆ ಪ್ರಾರಂಭಿಸಲು ಸರ್ಕಾರ ತೀರ್ಮಾನಿಸಿದೆ. ಎರಡನೇ ಹಂತದಲ್ಲಿ ಪಿಯುಸಿ, ಡಿಗ್ರೀ ತರಗತಿ ಆರಂಭವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!