ದ್ವಿತೀಯ ಪಿಯುಸಿ ವಾರ್ಷಿಕ, ಪ್ರಾಯೋಗಿಕ ಮತ್ತು ಪೂ‍ರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2023ರ ಸಂಪೂರ್ಣ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪ್ರಕಟ ಮಾಡಿದೆ.

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್‌ 9,2023 ರಿಂದ ಮಾರ್ಚ್‌ 29,2023ರ ವರೆಗೆ ನಡೆಸಲಾಗುತ್ತಿದೆ. ವೇಳಾಪಟ್ಟಿಯ ಅನುಸಾರ ಪರೀಕ್ಷೆಗಳು ಮಾರ್ಚ್ 9,2023 ರಿಂದ ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30ರ ವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಸಂಪೂರ್ಣ ವೇಳಾಪಟ್ಟಿಯನ್ನು ವೀಕ್ಷಿಸಲು ಮುಂದೆ ಓದಿ.

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2023ರ ವೇಳಾಪಟ್ಟಿ :

09-03-2023 – ಕನ್ನಡ, ಅರೇಬಿಕ್.
11-03-2023 -ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ.
13-03-2023- ಅರ್ಥಶಾಸ್ತ್ರ.
14-03-2023- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
15-03-2023- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ , ಫ್ರೆಂಚ್.
16-03-2023 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ.
17-03-2023 – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್.
18-03-2023- ಭೂಗೋಳಶಾಸ್ತ್ರ, ಜೀವಶಾಸ್ತ್ರ.
20-03-2023- ಇತಿಹಾಸ, ಭೌತಶಾಸ್ತ್ರ.
21-03-2023 – ಹಿಂದಿ.
23-03-2023- ಇಂಗ್ಲಿಷ್.
25-03-2023 -ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
27-03-2023 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ.
29-03-2023 -ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.

2022-23ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಜನವರಿ 23, 2೦23 ರಿಂದ ಫೆಬ್ರವರಿ 4.2023ರ ವರೆಗೆ ನಡೆಯಲಿದೆ. ದ್ವಿತೀಯ ಪಿಯು ಪೂವ ಸಿದ್ದತಾ ಪರೀಕ್ಷೆಗಳನ್ನು ಆಯಾ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ನಿಗದಿ ಮಾಡಲಾಗಿದೆ.

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ರಾಜ್ಯದಾದ್ಯಂತ ಏಕಕಾಲದಲ್ಲಿ ಅಂದರೆ ಫೆಬ್ರವರಿ 6.2023 ರಿಂದ ಫೆಬ್ರವರಿ 28,2023ರ ವರೆಗೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

2022-23ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆಪತ್ರಿಕೆಯಲ್ಲಿ ಯಾವುದೇ ಮಾರ್ಪಾಡು ಮಾಡಲಾಗಿಲ್ಲ. ಹಾಗಾಗಿ ಭಾಷಾ ಮತ್ತು ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದಿರುವುದರಿಂದ ಶೇಕಡ.100ರಷ್ಟು ಪಠ್ಯಕ್ರಮಕ್ಕೆ ಪ್ರಶ್ನೆಗಳನ್ನು ನೀಡಿ ಪರೀಕ್ಷೆಗಳನ್ನು ನಡೆಸಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!