ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಇಂದಿನಿಂದ ಆರಂಭವಾಗಲಿದೆ. ಇಂದು ಮಂಗಳವಾರ ಕನ್ನಡ ಪರೀಕ್ಷೆ ನಡೆಯಲಿದೆ. ನಾಳೆ ಐಚ್ಚಿಕ ಕನ್ನಡ, ರಸಾಯನಶಾಸ್ತ್ರ, ಮೂಲಗಣಿತ ಪರೀಕ್ಷೆ ನಡೆಯಲಿದೆ. ಜೂನ್‌ 2ರ ವರೆಗೆ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಬಿ) ಮಾಡಿಕೊಂಡಿದೆ. 2022-23ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಹಾಜರಾಗದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್‌ಗಳಿಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪ್ರಶ್ನೆ ಪತ್ರಿಕೆ ವಿತರಿಸಲು ಪ್ರತಿ ತಾಲೂಕಿನಲ್ಲೂ ತಹಶೀಲ್ದಾರ್, ಬಿಇಒ ಮತ್ತು ಪ್ರಾಂಶುಪಾಲರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆಪತ್ರಿಕೆಗಳನ್ನು ಸಾಗಿಸುವ ವಾಹನಕ್ಕೆ ಬಿಗಿಭದ್ರತೆ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್‌ ವ್ಯತ್ಯಯವಾಗದಂತೆ ಎಚ್ಚರವಹಿಸಬೇಕು ಎಂದು ಸೂಚಿನೆ ನೀಡಲಾಗಿದೆ.

ಪರೀಕ್ಷಾ ವೇಳಾಪಟ್ಟಿ ಹೀಗಿದೆ:

24-05-2023: ಮಂಗಳವಾರ- ಕನ್ನಡ
24-05-2023 ಬುಧವಾರ- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
25-05-2023 ಗುರುವಾರ -ಇಂಗ್ಲಿಷ್‌
26-05-2023 ಶುಕ್ರವಾರ- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಮತ್ತು ಗಣಕ ವಿಜ್ಞಾನ
27-05-2023 ಶನಿವಾರ- ಇತಿಹಾಸ ಮತ್ತು ಸಂಖ್ಯಾಶಾಸ್ತ್ರ
29-05-2023 ಸೋಮವಾರ – ಹಿಂದಿ ಪರೀಕ್ಷೆ ನಡೆಯಲಿದೆ.
30-05-2023 ಮಂಗಳವಾರ – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
31-05-2023 ಬುಧವಾರ – ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
01-06-2023 ಗುರುವಾರ – ರಾಜ್ಯ ಶಾಸ್ತ್ರ ಮತ್ತು ಗಣಿತ ಶಾಸ್ತ್ರ
02-06-2023 ಶುಕ್ರವಾರ – ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
03-06-2023 ಶನಿವಾರ – ಅರ್ಥ ಶಾಸ್ತ್ರ ಮತ್ತು ಜೀವಶಾಸ್ತ್ರ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!