ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ: ರಿಸಲ್ಟ್‌ ನೋಡುವುದು ಹೇಗೆ ಇಲ್ಲಿ ತಿಳಿಯಿರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪದವಿ ಪೂರ್ವ ಶಿಕ್ಷಣ ಇಲಾಖೆಯು ಕರ್ನಾಟಕ ದ್ವಿತೀಯ ಪಿಯುಸಿ ಪೂರಕ‌ ಪರೀಕ್ಷೆಯ ಫಲಿತಾಂಶ 2023 ಅನ್ನು ಪ್ರಕಟ ಮಾಡಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಮಂಡಳಿಯ ವೆಬ್‌ಸೈಟ್ https://karresults.nic.in ಅಥವಾ https://kseab.karnataka.gov.in/‌ ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

ಈ ಬಾರಿಯ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ಜು ಮೇ 23 ರಿಂದ ಜೂನ್ 03ರ ವರೆಗೆ ನಡೆಸಲಾಗಿತ್ತು. 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 74.64 ರಷ್ಟು ಫಲಿತಾಂಶ ದಾಖಲಾಗಿದ್ದು, ಇದರಲ್ಲಿ ಅನುತ್ತೀರ್ಣರಾದ ಮತ್ತು ಫಲಿತಾಂಶದಿಂದ ತೃಪ್ತರಾಗದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು.

ಫಲಿತಾಂಶ ವೀಕ್ಷಿಸುವುದು ಹೇಗೆ ?
ಸ್ಟೆಪ್ 1: ಮೊದಲು ಅಧಿಕೃತ ವೆಬ್‌ಸೈಟ್‌ karresults.nic.in ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶಕ್ಕಾಗಿ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟವು ತೆರೆಯುತ್ತದೆ, ಅಲ್ಲಿ ನಿಮ್ಮ ನೋಂದಣಿ ಸಂಖ್ಯೆ ಮತ್ತು ಇತರ ವಿವರಗಳನ್ನು ನಮೂದಿಸಿ
ಸ್ಟೆಪ್ 4: ಪೂರಕ ಪರೀಕ್ಷೆಯ ಫಲಿತಾಂಶ ಪರದೆಯ ಮೇಲೆ ಮೂಡುತ್ತದೆ
ಸ್ಟೆಪ್ 5: ಭವಿಷ್ಯದ ಉಲ್ಲೇಖಕ್ಕಾಗಿ ಫಲಿತಾಂಶದ ಹಾರ್ಡ್ ಪ್ರತಿಯನ್ನು ಡೌನ್‌ಲೋಡ್ ಮಾಡಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!