Tuesday, June 28, 2022

Latest Posts

ಕೊಡಗು-ದ.ಕ.ದ ಆರು ಮಂದಿಗೆ ಕರ್ನಾಟಕ ಅರೆಭಾಷೆ ಸಂಸ್ಕೃತಿ- ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ

ಹೊಸದಿಗಂತ ವರದಿ, ಮಡಿಕೇರಿ:

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2019-20 ಹಾಗೂ 2020-21ನೇ ಸಾಲಿನ ಗೌರವ ಪ್ರಶಸ್ತಿಗೆ ಆರು ಮಂದಿಯನ್ನು ಆಯ್ಕೆ ಮಾಡಲಾಗಿದ್ದು, ಜ.3 ರಂದು ಸುಳ್ಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಸುಳ್ಯದ ಅಮರಶ್ರೀಭಾಗ್’ನ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದರು.
2019-20ನೇ ಸಾಲಿನ ಗೌರವ ಪ್ರಶಸ್ತಿಗೆ ಸಾಹಿತ್ಯ ಕ್ಷೇತ್ರದಿಂದ ಎನ್.ಎಸ್.ದೇವಿಪ್ರಸಾದ್, ಜಾನಪದ ಕ್ಷೇತ್ರದಿಂದ‌ಪಂಜಿಪಳ್ಳ ಇಂದ್ರಾಕ್ಷಿ ವೆಂಕಪ್ಪ, ಚಿತ್ರಕಲೆ ಕ್ಷೇತ್ರದಿಂದ ದಿ.ಮೋಹನ್ ಸೋನಾ ಆಯ್ಕೆಯಾಗಿದ್ದಾರೆ.
2020-21ನೇ ಸಾಲಿಗೆ ಸಾಹಿತ್ಯ ಕ್ಷೇತ್ರದಲ್ಲಿ ಕುಂಞಟ್ಟಿ ಶಿವರಾಮ ಗೌಡ, ಸಂಶೋಧನೆ ಕ್ಷೇತ್ರದಲ್ಲಿ ಡಾ.ಕೋರನ ಸರಸ್ವತಿ ಪ್ರಕಾಶ್, ಪಾರಂಪರಿಕ ವೈದ್ಯ ಕ್ಷೇತ್ರಕ್ಕೆ ಪದ್ಮಯ್ಯ ಗೌಡ ಎನ್.ಪರಿವಾರನ ಆಯ್ಕೆಯಾಗಿದ್ದಾರೆ ಎಂದರು.
ಗೌರವ ಪ್ರಶಸ್ತಿಯು ರೂ.50 ಸಾವಿರ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿಪತ್ರವನ್ನು ಒಳಗೊಂಡಿದ್ದು, ಜ.3 ರಂದು ತನ್ನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಖಾತೆ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಮುಖ್ಯ ಅತಿಥಿಯಾಗಿ ಬಂದರು ಮತ್ತು ಮೀನುಗಾರಿಕೆ ಇಲಾಖೆ ಸಚಿವ ಎಸ್.ಅಂಗಾರ ಪಾಲ್ಗೊಳ್ಳಲಿದ್ದು, ಅತಿಥಿಗಳಾಗಿ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಮತ್ತು ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೊಂಬಾರನ ಜಿ.ಬೋಪಯ್ಯ, ಮಂಗಳೂರು ಲೋಕಾಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಪುತ್ತೂರು ವಿಧಾನ ಸಭಾಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಸುಳ್ಯ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಭಾಗವಹಿಸಲಿದ್ದಾರೆ.
ಮೈಸೂರಿನ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪಟ್ಟಡ ಶಿವಕುಮಾರ್ ಪ್ರಶಸ್ತಿ ಪುರಸ್ಕೃತರ ಬಗ್ಗೆ ಮಾತನಾಡಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಕಾಡೆಮಿಯ ಸದಸ್ಯರಾದ ಬೈತಡ್ಕ ಜಾನಕಿ, ಚೊಕ್ಕಾಡಿ ಪ್ರೇಮ ರಾಘವಯ್ಯ, ಡಾ. ಕೆ.ಸಿ.ದಯಾನಂದ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss