ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆ ; ಅಂತಿಮ ವೇಳಾಪಟ್ಟಿ ಔಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

2022- 2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಈ ಹಿಂದೆ ಏ.3ರಂದು ಮಹಾವೀರ ಜಯಂತಿ ಪ್ರಯುಕ್ತ ರಜೆಯನ್ನು ಘೋಷಿಸಲಾಗಿತ್ತು, ಆದರೆ ಈಗ ಏ.4ರಂದು ಮಹಾವೀರ ಜಯಂತಿ ರಜೆ ಎಂದು ತಿದ್ದುಪಡಿ ಮಾಡಿರುವ ಹಿನ್ನೆಲೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

ಈ ಹಿಂದೆ ಘೋಷಿಸಿದಂತೆ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಏಪ್ರಿಲ್ 4 ರಂದು ನಡೆಯಬೇಕಿದ್ದ ಗಣಿತ ಮತ್ತು ಸಮಾಜಶಾಸ್ತ್ರ ಪರೀಕ್ಷೆಗಳು ಈಗ ಏಪ್ರಿಲ್ 3 ರಂದು ನಡೆಯಲಿದೆ.

ಏಪ್ರಿಲ್ 4 ರಂದು ಸರ್ಕಾರಿ ರಜೆ ಇರುವ ಕಾರಣ ಈ ಹಿಂದೆ ಪ್ರಕಟಿಸಿದ್ದ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಿರ್ದೇಶಕ (ಪರೀಕ್ಷೆ) ಗೋಪಾಲಕೃಷ್ಣ ಎಚ್.ಎನ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!