ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ 2023ರ ಫಲಿತಾಂಶವನ್ನು ಇಂದು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಮಂಡಳಿಯ ಜಾಲತಾಣಗಳಾದ https://karresults.nic.in ಅಥವಾ https://kseab.karnataka.gov.in/ ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.
ಈ ಬಾರಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳನ್ನು ಜೂನ್ 12 ರಿಂದ ಜೂನ್ 19ರ ವರೆಗೆ ನಡೆಸಲಾಗಿತ್ತು. 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 83.89 ರಷ್ಟು ಫಲಿತಾಂಶ ದಾಖಲಾಗಿದ್ದು, ಇದರಲ್ಲಿ ಅನುತ್ತೀರ್ಣರಾದ ಮತ್ತು ಫಲಿತಾಂಶವನ್ನು ತಿರಸ್ಕರಿಸಿ ಪೂರಕ ಪರೀಕ್ಷೆ ಬರೆಯಲು ಬಯಸಿದ್ದ ಅಭ್ಯರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು.
ಕರ್ನಾಟಕ SSLC ಪೂರಕ ಪರೀಕ್ಷೆಯ ಫಲಿತಾಂಶ ನೋಡಲು ಕೆಳಗಿನ ವಿಧಾನ ಅನುಸರಿಸಿ
- ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ SSLC ಪೂರಕ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣುತ್ತದೆ.
- ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.
- ಮುಂದಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ತೆಗೆದುಕೊಳ್ಳಿ.