ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅಧ್ಯಕ್ಷ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಗೆಲುವು ಸಾಧಿಸಿದ್ದಾರೆ.
ಒಟ್ಟು 16 ಸ್ಥಾನಗಳಿಗೆ ಇಂದು (ಡಿಸೆಂಬರ್ 07) ಬೆಳಗ್ಗೆಯಿಂದ ಸಂಜೆ ವರೆಗೆ ಮತದಾನ ನಡೆದಿದ್ದು, ಇದೀಗ ಮತದಾನ ಎಣಿಕೆಯಲ್ಲಿ ವೆಂಕಟೇಶ್ ಪ್ರಸಾದ್ 191 ಮತಗಳ ಅಂತರ ಗೆದ್ದು ಬೀಗಿದ್ದಾರೆ.
ಮಾಜಿ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್ ಹಾಗೂ ಅನಿಲ್ ಕುಂಬ್ಳೆ ಬಣದ ವೆಂಕಟೇಶ್ ಪ್ರಸಾದ್‌ಗೆ ಒಟ್ಟು 749 ಮತಗಳು ಬಿದ್ದಿದ್ದರೆ, ಬ್ರಿಜೇಶ್ ಪಾಟೀಲ್ ಬಣದ ಶಾಂತಕುಮಾರ್‌ಗೆ 558 ಮತಗಳು ಲಭವಿಸಿವೆ.
ಇನ್ನು ವೆಂಕಟೇಶ್ ಪ್ರಸಾದ್ ಬಣದಿಂದ ಸುಜಿತ್ ಸೋಮಸುಂದರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರೆ, ಮಧುಕರ್ ಅವರು ಖಜಾಂಚಿಯಾಗಿ ಆಯ್ಕೆಯಾಗಿದರು. ಇನ್ನು ಕೆಎಸ್‌ಸಿಎ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೆನನ್ ಗೆಲುವು ಸಾಧಿಸಿದ್ದಾರೆ. ಈ ಬಾರಿ ಒಟ್ಟು 1315 ಮತಗಳ ಚಲಾವಣೆಯಾಗಿವೆ. 2013 ರಲ್ಲಿ 1351 ಮತಗಳ ಚಲಾವಣೆಗೊಂಡಿದ್ದವು. ಕೆಎಸ್ಸಿಎ ಇತಿಹಾಸದಲ್ಲಿ 2013ರಲ್ಲೇ ಅತಿ ಹೆಚ್ಚು ಮತದಾನವಾಗಿತ್ತು.

