ಕರ್ನಾಟಕ ರಾಜ್ಯ ಮುಕ್ತ ವಿವಿಯ ವಿವಿಧ ಕೋರ್ಸ್ ಗಳ ಪ್ರವೇಶಾತಿ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿಗೆ ಸ್ನಾತಕ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಸೆಪ್ಟೆಂಬರ್‌ 30,2023ರ ವರೆಗೆ ವಿಸ್ತರಿಸಲಾಗಿದೆ.

ಪ್ರಥಮ ವರ್ಷದ ಬಿಎ/ಬಿ.ಕಾಂ/ಬಿಬಿಎ/ಬಿಸಿಎ/ಬಿಎಸ್ಸಿ/ಬಿಎಸ್ಡಬ್ಲ್ಯು/ಬಿ.ಲಿಬ್ ಪದವಿ ಹಾಗೂ ಎಂ.ಎ/ಎಂ.ಕಾಂ/ಎಂಸಿಎ/ಎಂಎಸ್ಡಬ್ಲ್ಯು/ಎಂ.ಲಿಬ್ ಮತ್ತು ಎಂಎಸ್ಸಿ, ಎಂಬಿಎ ಸ್ನಾತಕೋತ್ತರ ಪದವಿ ಮತ್ತು ಪಿಜಿ ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದು.

ಆಸಕ್ತ ವಿದ್ಯಾರ್ಥಿಗಳು ಕರಾಮುವಿಯ ಅಧಿಕೃತ ವೆಬ್: www.ksoumyasuru.ac.in ಮೂಲಕ ಸೆಪ್ಟೆಂಬರ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!