ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿಗೆ ಸ್ನಾತಕ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಿದೆ.

ಪ್ರಥಮ ವರ್ಷದ ಬಿಎ/ಬಿ.ಕಾಂ/ಬಿಬಿಎ/ಬಿಸಿಎ/ಬಿಎಸ್ಸಿ/ಬಿಎಸ್ಡಬ್ಲ್ಯು/ಬಿ.ಲಿಬ್ ಪದವಿ ಹಾಗೂ ಎಂ.ಎ/ಎಂ.ಕಾಂ/ಎಂಸಿಎ/ಎಂಎಸ್ಡಬ್ಲ್ಯು/ಎಂ.ಲಿಬ್ ಮತ್ತು ಎಂಎಸ್ಸಿ, ಎಂಬಿಎ ಸ್ನಾತಕೋತ್ತರ ಪದವಿ ಮತ್ತು ಪಿಜಿ ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್‌ 31,2023 ಕೊನೆಯ ದಿನವಾಗಿರುತ್ತದೆ. ಅಧಿಕೃತ ವೆಬ್‌ಸೈಟ್‌ www.ksoumysuru.ac.in ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!