ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 6 ಪ್ರಶಸ್ತಿಗಳು ಒಲಿದು ಬಂದಿದೆ.
ಇ.ವಿ.ಪವರ್ ಪ್ಲಸ್ ವ್ಯವಸ್ಥೆಗಾಗಿ ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ, ಅತ್ಯುತ್ತಮ ಬ್ರಾಂಡಿಂಗ್ ಮತ್ತು ಮಾರ್ಕೆಟಿಂಗ್ ಉಪಕ್ರಮಕ್ಕಾಗಿ ಜಾಗತಿಕ ಬ್ರಾಂಡ್ ಉತ್ಕೃಷ್ಟತೆ ಪ್ರಶಸ್ತಿ, ಅತ್ಯುತ್ತಮ ವಿನೂತನ ಉಪಕ್ರಮ ಸಂಸ್ಥೆಗಾಗಿ ವರ್ಷದ ವ್ಯಾವಹಾರಿಕ ನಾಯಕತ್ವ ಪ್ರಶಸ್ತಿ, ಕಾರ್ಮಿಕರೊಂದಿಗೆ ಉತ್ತಮ ಭಾಂದವ್ಯಕ್ಕಾಗಿ ಜಾಗತಿಕ ಮಾನವ ಸಂಪನ್ಮೂಲ ಉತ್ಕೃಷ್ಟತೆ ಪ್ರಶಸ್ತಿ, ಜಾಗತಿಕ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ದಕ್ಕಿದೆ.
ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್ ಅವರಿಗೆ ವಿಶ್ವ ಮಾರ್ಕೆಟಿಂಗ್ ಉತ್ಕೃಷ್ಟತೆಗಾಗಿ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಶನಿವಾರ ಮುಂಬೈನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುನೈಟೆಡ್ ಸ್ಟೇಟ್ಸ್‌ನ ನಿನಾ ಇ ಉಡರ್ಡ ಅಸೋಸಿಯೇಟ್ಸ್ ಅಧ್ಯಕ್ಷರು ಹಾಗೂ ಮುಖ್ಯಸ್ಥರಾದ ನಿನಾ ಇ ಉಡರ್ಡ, ದುಬೈನ ಓಝೋನ್ ಗ್ರೂಪ್‌ನ ಸಂಸ್ಥಾಪಕರಾದ ಡಾ. ಓವಿಲಿಯಾ ಫೆರ್ನಾಂಡಿಸ್ ಅವರು ನಿಗಮಕ್ಕೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.