Monday, January 26, 2026
Monday, January 26, 2026
spot_img

ಪಂಜಾಬ್‌ ವಿರುದ್ಧದ ರಣಜಿ ಗೇಮ್‌ಗೆ ಕರ್ನಾಟಕ ತಂಡ ಪ್ರಕಟ, ಕ್ಯಾಪ್ಟನ್‌ ಯಾರು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಂಜಾಬ್ ವಿರುದ್ಧದ ಮುಂದಿನ ರಣಜಿ ಟ್ರೋಫಿ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ.

ವಿಜಯ್ ಹಜಾರೆ ಟ್ರೋಫಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಮಯಾಂಕ್ ಅಗರ್ವಾಲ್‌ರನ್ನು ನಾಯಕತ್ವದಿಂದ ತೆಗೆದುಹಾಕಿದ್ದು, ಅವರ ಬದಲಿಗೆ ಯುವ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ.

ಇತ್ತೀಚಿಗಷ್ಟೇ ಮುಗಿದ ವಿಜಯ್ ಹಜಾರೆ ಟ್ರೋಫಿಯಲ್ಲಿ ದೇವದತ್ ಪಡಿಕ್ಕಲ್ ಅದ್ಭುತ ಪ್ರದರ್ಶನ ನೀಡಿದ್ದರು. ಅದರ ಫಲವಾಗಿ ಇದೀಗ ಪಡಿಕ್ಕಲ್​ಗೆ ತಂಡದ ನಾಯಕತ್ವ ನೀಡಲಾಗಿದೆ. ಇನ್ನೊಂದು ಪ್ರಮುಖ ಸುದ್ದಿಯೆಂದರೆ ಕೆಎಲ್ ರಾಹುಲ್ ಕೂಡ ರಣಜಿ ಟ್ರೋಫಿ ಪಂದ್ಯದಲ್ಲಿ ಆಡುವುದನ್ನು ಕಾಣಬಹುದು.

ಮುಂದಿನ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕದ ಪರವಾಗಿ ಕೆಎಲ್ ರಾಹುಲ್ ಆಡಲಿದ್ದಾರೆ. ಈ ಪಂದ್ಯ ಜನವರಿ 29 ರಂದು ಮೊಹಾಲಿಯಲ್ಲಿ ಪಂಜಾಬ್ ವಿರುದ್ಧ ನಡೆಯಲಿದೆ. ರಾಹುಲ್ ಮಾತ್ರವಲ್ಲದೆ, ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೆ ಅನುಭವಿ ಬ್ಯಾಟ್ಸ್‌ಮನ್ ಕರುಣ್ ನಾಯರ್ ಫಿಟ್ನೆಸ್ ಇಲ್ಲದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಕರುಣ್ ಜೊತೆಗೆ ಅಭಿನವ್ ಮನೋಹರ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಟೀಂ ಮೆಂಬರ್ಸ್‌ ಇವರು..

ಮಾಯಂಕ್ ಅಗರ್ವಾಲ್, ಕೆಎಲ್ ರಾಹುಲ್, ಕೆವಿ ಅನೀಶ್, ದೇವದತ್ ಪಡಿಕ್ಕಲ್ (ನಾಯಕ), ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ಕೃತಿಕ್ ಕೃಷ್ಣ, ಎಂ ವೆಂಕಟೇಶ್, ವಿದ್ಯಾದರ್ ಪಾಟೀಲ್, ವಿದ್ವತ್ ಕಾವೇರಪ್ಪ, ಪ್ರಸಿದ್ಧ್ ಕೃಷ್ಣ, ಮೊಹ್ಸಿನ್ ಖಾನ್, ಶಿಖರ್ ಶೆಟ್ಟಿ, ಕೆಎಲ್ ಶ್ರೀಜಿತ್ ಮತ್ತು ಧ್ರುವ ಪ್ರಭಾಕರ್.

Must Read