ನೀತಿ ಆಯೋಗದ ಭಾರತ ನಾವೀನ್ಯತೆ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕಕ್ಕೆ ಅಗ್ರ ಸ್ಥಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀತಿ ಆಯೋಗದ ಭಾರತ ನಾವೀನ್ಯತೆ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆಯುವ ಮೂಲಕ ಸತತ 3ನೇ ಬಾರಿ ಮೊದಲ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪ್ರಮುಖ ರಾಜ್ಯಗಳ ಪೈಕಿ ಕರ್ನಾಟಕ, ತೆಲಂಗಾಣ ಮತ್ತು ಹರಿಯಾಣ ಕ್ರಮವಾಗಿ ಮೊದಲ 3 ಸ್ಥಾನ ಗಳಿಸಿವೆ. ಇನ್ನು ಛತ್ತೀಸ್‌ಗಢ, ಒಡಿಶಾ ಮತ್ತು ಬಿಹಾರ ರಾಜ್ಯಗಳು ಸೂಚ್ಯಂಕ ಪಟ್ಟಿಯಲ್ಲಿ ಕೆಳಗಿನ ಸ್ಥಾನ ಪಡೆದಿವೆ.

ರಾಜ್ಯ ಮಟ್ಟದಲ್ಲಿ ನಾವೀನ್ಯತೆ ಸಾಮರ್ಥ್ಯ ಮತ್ತು ಪರಿಸರ ವ್ಯವಸ್ಥೆಗಳನ್ನು ನೀತಿ ಆಯೋಗದ ಭಾರತ ನಾವೀನ್ಯತೆ ಸೂಚ್ಯಂಕ 2021 ಪರಿಶೀಲಿಸುತ್ತದೆ. ಗುರುವಾರ ನೀತಿ ಆಯೋಗದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪರಮೇಶ್ವರನ್ ಅಯ್ಯರ್ ಸಮ್ಮುಖದಲ್ಲಿ ಉಪಾಧ್ಯಕ್ಷ ಸುಮನ್ ಬೆರಿ, ಜಾಗತಿಕ ನಾವೀನ್ಯತೆ ಸೂಚ್ಯಂಕದ ಮಾದರಿಯಲ್ಲಿ ಅಭಿವೃದ್ಧಿಗೊಂಡಿರುವ ಸೂಚ್ಯಂಕ ಬಿಡುಗಡೆ ಮಾಡಿದರು.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಯಕ್ಷಮತೆ ಆಧಾರದಲ್ಲಿ ಪರಿಗಣಿಸಲಾಗಿದ್ದು, ಅದರಂತೆ, 17 ಪ್ರಮುಖ ರಾಜ್ಯಗಳು, 10 ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳು ಮತ್ತು 9 ಕೇಂದ್ರಾಡಳಿತ ಪ್ರದೇಶಗಳು ಮತ್ತು ನಗರ ರಾಜ್ಯಗಳು ಎಂದು ವಿಂಗಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!