ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ದಚಿತ್ರ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ದಚಿತ್ರ ಆಯ್ಕೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ ಅವರು, ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ. ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತದಿಂದ ಆಯ್ಕೆಯಾದ ರಾಜ್ಯಗಳ ಸ್ತಬ್ದ ಚಿತ್ರಗಳ ಟ್ಯಾಬ್ಲೋಗಳು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿವೆ.
ಇನ್ನು ಕೇರಳದ ಬ್ರಹ್ಮರ್ಷಿ ನಾರಾಯಣ ಗುರುಗಳ ಸ್ತಬ್ದಚಿತ್ರ ಆಯ್ಕೆಯಾಗದ ಕುರಿತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವರು ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!