Wednesday, November 30, 2022

Latest Posts

31 ವರ್ಷದಲ್ಲಿ ಕರ್ನಾಟಕ ಮೂರು ಭಾಗ, ಮೂರು ಮುಖ್ಯಮಂತ್ರಿ: ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

31 ವರ್ಷದೊಳಗೆ ಕರ್ನಾಟಕ ಮೂರು ಭಾಗ ಆಗಿ, ಮೂರು ಮುಖ್ಯಮಂತ್ರಿ, ಮೂವರು ರಾಜ್ಯಪಾಲರಾಗುತ್ತಾರೆ. ಇದು ಶಿವನ ಆಣೆಗೂ ಸತ್ಯ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ.
ಹಾಸನಾಂಬೆ ದರ್ಶನ ಪಡೆದು ಮಾತನಾಡಿದ ಅವರು, ದೇಶದ ಬಗ್ಗೆ ಮಾತನಾಡಿದಾಗ ಹೆಚ್ಚಾಗಿ ಟ್ರೋಲ್ ಮಾಡುತ್ತಾರೆ. ಹೀಗಾಗಿ ಪಾರ್ಲಿಮೆಂಟ್ ಏನು ಕಟ್ಟಿದ್ದಾರೆ ಅದು ಭಾರೀ ಘೋರವಾಗಿರುತ್ತದೆ ಎನ್ನುವುದನ್ನು ವೀರ ಬ್ರಹ್ಮಸ್ವಾಮಿ ಚರಿತ್ರೆಯಲ್ಲಿ ಬರೆದಿದ್ದಾರೆ. ತ್ರಿಕೋನಾತ್ಮಿಕ ದೀಪಿಕ, ಯಾವುದೇ ಪಾರ್ಲಿಮೆಂಟ್ ಗುಂಡಾಗಿರಬೇಕು, ಇಲ್ಲ ಚೌಕವಾಗಿರಬೇಕು, ಇಲ್ಲ ಚಂದ್ರ ಪೂರ್ತಿಯಾಗಿ ಕುಜನಾಂಶವಾಗಿರಬೇಕು.
ತ್ರಿಕೋನ ಮಾಡಿದಾಗ ಉಗ್ರವಾಗಿರುತ್ತದೆ. ಇನ್ಮೇಲೆ ದೇಶದ ಮೇಲೆ, ಜನರ ಮೇಲೆ ಒತ್ತಾಯ, ಒತ್ತಡಗಳು ಜಾಸ್ತಿ ಆಗುತ್ತದೆ. ಮೊದಲು ಕದ್ದುಮುಚ್ಚಿ ಲಂಚ ತೆಗೆದುಕೊಳ್ಳುತ್ತಿದ್ದರು. ಈಗ ಎಲ್ಲಾ ಓಪನ್. ದಡಂದಶಗುಣಂ ಭಗವಂತ ಆ ಸಮಯಕ್ಕೆ ಬಂದೇ ಬರುತ್ತಾನೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!