Sunday, December 4, 2022

Latest Posts

ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಒಂದು ಕೋಟಿ ಆಯುಷ್ಮಾನ್ ಕಾರ್ಡ್ ವಿತರಣೆ: ಆರೋಗ್ಯ ಸಚಿವ ಸುಧಾಕರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಈ ಡಿಸೆಂಬರ್ ಅಂತ್ಯದ ವೇಳೆಗೆ ಒಂದು ಕೋಟಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ರಾಜ್ಯ ಸರ್ಕಾರ ವಿತರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಕಡಿಮೆ ಅವಧಿಯಲ್ಲಿ ಹೆಚ್ಚಿನ ಕಾರ್ಡ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಸುಧಾಕರ್ ಹೇಳಿದರು. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆಯಲ್ಲಿ ಕರ್ನಾಟಕ ಇಡೀ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಹೊರಹೊಮ್ಮಿದೆ.
ಡಿಸೆಂಬರ್ ಅಂತ್ಯದೊಳಗೆ ಎಲ್ಲಾ ಅರ್ಹ ಜನರಿಗೆ ಒಂದು ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್‌ಗಳನ್ನು ವಿತರಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಗುರಿಯೊಂದಿಗೆ, ಬಡತನ ರೇಖೆಗಿಂತ ಕೆಳಗಿರುವ ಎಲ್ಲಾ ರೋಗಿಗಳಿಗೆ ಉಚಿತ ಮತ್ತು ನಗದು ರಹಿತ ಪ್ರಾಥಮಿಕ, ಮಾಧ್ಯಮಿಕ ಮತ್ತು ತೃತೀಯ ಆರೋಗ್ಯ ಸೇವೆಯನ್ನು ಒದಗಿಸಲು ರಾಜ್ಯವು ಆರೋಗ್ಯ ಕರ್ನಾಟಕ ಯೋಜನೆಯನ್ನು ಮಾರ್ಚ್ 2, 2018 ರಂದು ಪ್ರಾರಂಭಿಸಿದೆ. ಈ ಯೋಜನೆಯಿಂದ ಅರ್ಹ ಕುಟುಂಬಕ್ಕೆ ವರ್ಷಕ್ಕೆ ಎರಡು ಲಕ್ಷ ರೂ. ಸಿಗಲಿದೆ  ಸಚಿವರು ವಿವರಿಸಿದರು.
ಈ ಯೋಜನೆಯು ಉನ್ನತ ಸರ್ಕಾರಿ ಮತ್ತು ಎಂಪನೆಲ್ಡ್ ಖಾಸಗಿ ಆಸ್ಪತ್ರೆಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ ರೋಗಿಗಳಿಗೆ ಶೇಕಡಾ 30 ರಷ್ಟು ಸಬ್ಸಿಡಿ ಸಹ-ಪಾವತಿ ಪ್ಯಾಕೇಜ್ ಅನ್ನು ನೀಡುತ್ತದೆ ಎಂದು ಅವರು ಹೇಳಿದರು.
ಇದು ವಿಪರೀತ ಆರೋಗ್ಯ ವೆಚ್ಚಗಳಿಂಸದ ಕುಟುಂಬಗಳ ರಕ್ಷಣೆಯನ್ನು ಖಾತ್ರಿಗೊಳಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!