ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದೇಶಿ ಬಂಡವಾಳ ಸ್ವೀಕಾರದಲ್ಲಿ ಕರ್ನಾಟಕ ರಾಜ್ಯ ಮಹಾರಾಷ್ಟ್ರವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೆ ಏರಿಕೆಯಾಗಿದೆ
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ರಾಜ್ಯಗಳು ಸ್ವೀಕರಿಸಿದ ವಿದೇಶಿ ಬಂಡವಾಳ ಪಟ್ಟಿಯಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದ್ದು, ₹50,107 ಕೋಟಿ ಬಂಡವಾಳ ರಾಜ್ಯಕ್ಕೆ ಹರಿದುಬಂದಿದೆ. ಹಾರಾಷ್ಟ್ರವನ್ನು ಹಿಂದಿಕ್ಕಿ ರಾಜ್ಯ ಪ್ರಥಮ ಸ್ಥಾನ ತಲುಪಿದೆ. ಇದು ಕರ್ನಾಟಕದ ಬಗೆಗೆ ಅಂತಾರಾಷ್ಟ್ರೀಯ ಹೂಡಿಕೆದಾರರು ಹೊಂದಿರುವ ವಿಶ್ವಾಸ ಮತ್ತು ಭರವಸೆಯನ್ನು ಪ್ರತಿಬಿಂಬಿಸುತ್ತದೆ ಎಂದರು.
ಕರ್ನಾಟಕದ ಈ ಸಾಧನೆಗೆ ನಮ್ಮ ಸರ್ಕಾರದ ನೀತಿಗಳು ರಾಜ್ಯದಲ್ಲಿ ಹೂಡಿಕೆ ಸ್ನೇಹಿ ಪರಿಸರ ನಿರ್ಮಿಸಿರುವುದು ಕಾರಣ ಎಂಬುದನ್ನು ಈ ಸಂದರ್ಭದಲ್ಲಿ ನೆನೆಯಲು ಬಯಸುತ್ತೇನೆ ಎಂದು ಹೇಳಿದ್ದಾರೆ.
https://x.com/siddaramaiah/status/1963547274442629628