ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಹೊಸದಿಗಂತ ವರದಿ, ಮಂಗಳೂರು
ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ತನ್ನ ತೀವ್ರತೆ ಕಳೆದುಕೊಂಡು ದುರ್ಬಲವಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಕ್ಷೀಣವಾಗಿದೆ.
ಶನಿವಾರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕೊಡಗು, ಆಗುಂಬೆ, ಶಿೃಂಗೇರಿ ಹಾಗೂ ಚಿಕ್ಕಮಗಳೂರಿನ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ.
ಇನ್ನು ಕಾಸರಗೋಡು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆ, ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ತುಂತುರು ಮಳೆ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!