ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದ ಹ್ಯಾಂಗ್‌ಝೌ ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಇಂದು ಕರ್ನಾಟಕದ ಮಹಿಳಾ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್
ಬೆಳ್ಳಿ ಪದಕ ಗೆದ್ದಿದ್ದಾರೆ.
ಈ ಮೂಲಕ ಅವರು ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಇಂದು ನಡೆದ ಅಂತಿಮ ಸುತ್ತಿನಲ್ಲಿ ಅದಿತಿ ಅಶೋಕ್ 7-ಸ್ಟ್ರೋಕ್ ಮುನ್ನಡೆಯೊಂದಿಗೆ ಆಟವನ್ನು ಪ್ರಾರಂಭಿಸಿದರು. ಆದರೆ ಕೊನೆಯಲ್ಲಿ 267 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಾಲ್ಫ್ ನಲ್ಲಿ ಭಾರತಕ್ಕೆ ಒಲಿದ ಮೊದಲ ಪದಕ ಇದಾಗಿದೆ. ಥಾಯ್ಲೆಂಡ್ ನ ಅರ್ಪಿಚಯಾ ಯುಬೋಲ್ ಅವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ.