ಇಡೀ ದೇಶಕ್ಕೇ ಕರ್ನಾಟಕದ ‘ಗ್ಯಾರೆಂಟಿ’ ಮಾದರಿ: ಬಜೆಟ್ ಅಧಿವೇಶನದಲ್ಲಿ ಗೆಹ್ಲೋಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಷನ ಉದ್ದೇಶಿಸಿ ಮಾತನಾಡಿದ್ದಾರೆ.

ಇಡೀ ದೇಶಕ್ಕೇ ನಮ್ಮ ಕರ್ನಾಟಕದ ಗ್ಯಾರೆಂಟಿ ಯೋಜನೆಗಳು ಮಾದರಿಯಾಗಿವೆ, ಸರ್ಕಾರ ನಡೆ ನುಡಿಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳಿಂದ ಸಾಕಷ್ಟು ಜನರು ಜೀವನ ನಡೆಸಲು ಸಹಾಯವಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ಯಾರೆಂಟಿಗಳ ಮೇಲೆ ಕೆಲಸ ಮಾಡಿದ್ದು, ಇದರಿಂದ ಬಡವರಿಗೆ ಸಹಾಯ ಆಗಿದೆ ಎಂದಿದ್ದಾರೆ.

ಇಡೀ ದೇಶಕ್ಕೆ ನಮ್ಮ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ ಯೋಜನೆಗಳು ಬಡವರಿಗೆ ತೃಪ್ತಿ ನೀಡಿದೆ. ಸರ್ಕಾರದ ಈ ಯೋಜನೆಗಳಿಂದ ಎರಡು ಕೋಟಿಗೂ ಹೆಚ್ಚು ಕುಟುಂಬಗಳು ಬಡತನ ರೇಖೆಯಿಂದ ಹೊರಬಂದಿವೆ. ಇನ್ನು ಐದು ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗಕ್ಕೆ ಬಂದಿದ್ದಾರೆ. ಇದು ಜಾಗತಿಕ ದಾಖಲೆ ಎಂದು ಹೇಳಿದ್ದಾರೆ.

ಇನ್ನು ದೇಶದಲ್ಲಿಯೇ ಅತಿಹೆಚ್ಚು ತೆರಿಗೆ ಸಂಗ್ರಹ ಮಾಡಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!