ಕರ್ನಾಟಕದ ವಕೀಲರು ಕಪ್ಪು ಕೋಟ್ ಧರಿಸುವುದರಿಂದ ತಾತ್ಕಾಲಿಕ ವಿನಾಯಿತಿ: ಕಾರಣ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಪ್ರಿಲ್ 18 ರಿಂದ ಮೇ 31 ರವರೆಗೆ ರಾಜ್ಯದ ಜಿಲ್ಲಾ ನ್ಯಾಯಾಲಯಗಳು ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ಹಾಜರಾಗುವ ವಕೀಲರು ಕಪ್ಪು ಕೋಟ್ ಧರಿಸುವುದರಿಂದ ಕರ್ನಾಟಕ ಹೈಕೋರ್ಟ್ ವಿನಾಯಿತಿ ನೀಡಿದೆ. ಮಂಗಳವಾರ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಿಂದ ಏಪ್ರಿಲ್ 5 ರಂದು ಸ್ವೀಕರಿಸಿದ ಮನವಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಉಷ್ಣಾಂಶ ಗರಿಷ್ಠ ಮಟ್ಟ ತಲುಪಿದೆ. ಆದ್ದರಿಂದ, ಅಂತಹ ಸಂದರ್ಭಗಳಲ್ಲಿ ಕಪ್ಪು ಕೋಟ್ ಧರಿಸುವುದು ಸಮಸ್ಯೆಯಾಗುತ್ತದೆ. ಆದ್ದರಿಂದ ಕಪ್ಪು ಬಟ್ಟೆ ಧರಿಸುವುದರಿಂದ ತಾತ್ಕಾಲಿಕವಾಗಿ ವಿನಾಯಿತಿ ನೀಡಬೇಕು ಎಂದು ಈ ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!