August 24, 2026
Monday, August 24, 2026
spot_img

ಈ ಬಾರಿಯ ಬಜೆಟ್‌ನಲ್ಲೂ ಕರ್ನಾಟಕದ ನಿರ್ಲಕ್ಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿಯ ಬಜೆಟ್‌ನಲ್ಲೂ ಕೇಂದ್ರ ಸರ್ಕಾರ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಟೀಕಿಸಿದ್ದಾರೆ.

ಕೊಪ್ಪಳದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಕರ್ನಾಟಕಕ್ಕೆ ಬರಬೇಕಿದ್ದ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ. ರಾಜ್ಯದ ಜನತೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್‌ ಬೊಮ್ಮಾಯಿ, ಜಗದೀಶ್‌ ಶೆಟ್ಟರ್‌, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಚೆಯಂಥ ಹಿರಿಯ ನಾಯಕರು ಆಯ್ಕೆಯಾಗಿದ್ದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡುತ್ತಿಲ್ಲ ಎಂದು ಸಚಿವರು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !