Monday, January 30, 2023

Latest Posts

ಗಡಿ ವಿವಾದಕ್ಕೆ ಸಂಬಂಧಿಸಿ ಕರ್ನಾಟಕದ ನೀತಿ ಸ್ಪಷ್ಟ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಗಡಿ ವಿವಾದಕ್ಕೆ ಸಂಬಂಧಿಸಿ ಕರ್ನಾಟಕದ ನೀತಿಯನ್ನು ಸ್ಪಷ್ಟವಾಗಿ ಪ್ರಕಟಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕನ್ನಡಿಗರ ರಕ್ಷಣೆ, ಅಲ್ಲಿನ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ಸಲುವಾಗಿ ಕ್ರಮವಹಿಸಿದ್ದು, ಮಹಾರಾಷ್ಟ್ರ ಡಿಜಿಪಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇವೆ. ಕರ್ನಾಟಕದಲ್ಲಿಯೂ ಕೂಡ ಸಂಪುರ್ಣ ಬಂದೋಬಸ್ತು ಮಾಡಲಾಗಿದೆ. ನಾನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಕನ್ನಡ ನಾಡಿನ ನಿಲುವನ್ನು ಸ್ಪಷ್ಟಪಡಿಸಲಾಗಿದೆ.ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಕರೆ ಮಾಡಿ ಸೌಹಾರ್ದತೆ ಕಾಪಾಡಿಕೊಳ್ಳಲು ಹೇಳಿದ್ದಾರೆ ಎಂದರು.

ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದೇವೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆ ಆಗಕೂಡದು ಎಂದು ಆಗ್ರಹಿಸಿದ್ದೇವೆ. ಅಮಿತ್ ಶಾ, ಅವರಾಗಲಿ ಬೇರೆ ಯಾರೂ ನನ್ನ ಬಳಿ ಈ ಕುರಿತು ಮಾತನಾಡಿಲ್ಲ ಎಂದು ಬೊಮ್ಮಾಯಿ ಮಾಹಿತಿ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!