ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಸಿಗದ ಅವಕಾಶ: ಈ ಕುರಿತು ಸ್ಪಷ್ಟನೆ ನೀಡಿದ ನೋಡೆಲ್‌ ಅಧಿಕಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದಕ್ಕೆ ಸ್ತಬ್ದಚಿತ್ರ ನೋಡೆಲ್‌ ಅಧಿಕಾರಿ ಸಿ.ಆರ್‌.ನವೀನ್ ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕಳೆದ 8 ವರ್ಷಗಳಲ್ಲಿ ಭಾಗವಹಿಸುವ ಅವಕಾಶ ದೊರೆಯದ ಹಾಗೂ ಅತಿ ಕಡಿಮೆ ಬಾರಿ ಪಾಲ್ಗೊಂಡ ರಾಜ್ಯಗಳಿಗೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ. ಹೀಗಾಗಿ ಕರ್ನಾಟಕ ರಾಜ್ಯಕ್ಕೆ ಈ ಬಾರಿ ಗಣರಾಜ್ಯೋತ್ಸವದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವ ಅವಕಾಶ ದೊರೆತಿಲ್ಲ ಎಂದು ತಿಳಿಸಿದ್ದಾರೆ.

ಕಳೆದ ವರ್ಷದ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದ ರಾಜ್ಯಗಳ ಪಟ್ಟಿ ಹಾಗೂ ಈ ಬಾರಿ ಆಯ್ಕೆಯಾಗಿರುವ ರಾಜ್ಯಗಳ ಪಟ್ಟಿಯನ್ನು ಗಮನಿಸಿದರೆ, 2022ರಲ್ಲಿ ಮೊದಲ ಮೂರು ಬಹುಮಾನ ಪಡೆದ ರಾಜ್ಯಗಳು ಈ ಬಾರಿ ಆಯ್ಕೆಯಾಗಿರುವುದಿಲ್ಲ. ಕಳೆದ ವರ್ಷ ಭಾಗವಹಿಸಿದ್ದ ಮೂರು ರಾಜ್ಯಗಳನ್ನು ಹೊರತುಪಡಿಸಿದರೆ, ಇನ್ನುಳಿದ ರಾಜ್ಯಗಳು ಆಯ್ಕೆಯಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!