ಹೊಸದಿಗಂತ ಡಿಜಿಟಲ್ ಡೆಸ್ಕ್
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಮತ್ತು ಇತರ ಇಬ್ಬರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಶೇಷ ಸಿಬಿಐ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ.
ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಚೀನಾ ವೀಸಾ ಹಗರಣ ಪ್ರಕರಣದಲ್ಲಿ ಕಾರ್ತಿ ಚಿದಂಬರಂ, ಎಸ್ ಭಾಸ್ಕರ್ ರಾಮನ್ ಮತ್ತು ವಿಕಾಸ್ ಮಖಾರಿಯಾ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಇಂದು ವಜಾಗೊಳಿಸಿದೆ .
ಕಾಂಗ್ರೆಸ್ ಸಂಸದ ಕಾರ್ತಿಯವರು, ಅವರ ತಂದೆ ಮತ್ತು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಈ ವಿಷಯದಲ್ಲಿ ಸಿಬಿಐ ಪ್ರಕರಣದ ನಂತರ ಕೇಂದ್ರೀಯ ಸಂಸ್ಥೆ ವಿರುದ್ಧ ಹೂಡಿರುವ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ನಡೆಸುತ್ತಿದೆ.