ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರೂರು ಕಾಲ್ತುಳಿತ ಘಟನೆಯನ್ನು ಕೇಂದ್ರ ತನಿಖಾ ದಳ (ಸಿಬಿಐ)ದ ತನಿಖೆಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಆಲಿಸಲು ಸುಪ್ರೀಂ ಕೋರ್ಟ್ ಇಂದು ಒಪ್ಪಿಗೆ ನೀಡಿದೆ.
ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್.ಗವಾಯಿ ಅವರಿದ್ದ ಪೀಠ ಅಕ್ಟೋಬರ್ 10ರಂದು ವಿಚಾರಣೆ ನಡೆಸಲಿದೆ.
ಬಿಜೆಪಿ ನಾಯಕಿ ಹಾಗು ಕೌನ್ಸಿಲರ್ ಆಗಿರುವ ಉಮಾ ಆನಂದನ್ ಅವರು ಕಾಲ್ತುಳಿತ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅವರಿಂದ ನಡೆಸುತ್ತಿರುವ ತನಿಖೆ ತೃಪ್ತಿ ತಂದಿಲ್ಲ. ಹಾಗಾಗಿ, ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದೆ ಎಂದು ವಾದಿಸಿದ್ದಾರೆ.
ಆದರೆ, ಸಿಬಿಐ ತನಿಖೆಗೆ ಕೋರಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ವಿಭಾಗೀಯ ಪೀಠ ತಿರಸ್ಕರಿಸಿದೆ. ಇದು ಮಧುರೈ ಪೀಠದ ವ್ಯಾಪ್ತಿಗೆ ಬರುತ್ತದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ಮಧುರೈ ಪೀಠಕ್ಕೇ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.
ಕಾಲ್ತುಳಿತದ ತನಿಖೆ ನಡೆಸಲು ಪೊಲೀಸ್ ಮಹಾನಿರ್ದೇಶಕ (ಉತ್ತರ) ಆಸ್ರಾ ಗರ್ಗ್ ನೇತೃತ್ವದಲ್ಲಿ ಮದ್ರಾಸ್ ಹೈಕೋರ್ಟ್ ಪೀಠ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.
ಮಧುರೈ ಪೀಠ ಎಸ್ಒಪಿ ರೂಪಿಸುವವರೆಗೆ ತಮಿಳುನಾಡು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕ ಕಾರ್ಯಕ್ರಮ ಅಥವಾ ರಾಜಕೀಯ ಸಭೆಗಳನ್ನು ಆಯೋಜನೆಗೆ ನಿಷೇಧಿಸುವಂತೆಯೂ ತಿಳಿಸಿದೆ.