Tuesday, September 30, 2025

ಕರೂರು ಕಾಲ್ತುಳಿತ ದುರಂತ: TVK ನಾಯಕ ಅರೆಸ್ಟ್! ಇಷ್ಟಕ್ಕೂ ಈ ನಾಯಕ ಮಾಡಿದ್ದಾದ್ರು ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಟಿವಿಕೆ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳಗ ವೆಟ್ರಿ ಕಳಗಂ ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್‌ನನ್ನು ಪೊಲೀಸರು ಬಂಧಿಸಿದ್ದು, ದುರಂತಕ್ಕೆ ಕಾರಣವಾದ ಲೋಪಗಳಿಗೆ ಅವರನ್ನೇ ಹೊಣೆಗಾರರನ್ನಾಗಿ ಮಾಡಿದ್ದಾರೆ.

ಈ ಹಿಂದೆ ಆತನ ವಿರುದ್ಧ ಕೊಲೆ ಯತ್ನ, ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಟಿವಿಕೆ ಪ್ರಧಾನ ಕಾರ್ಯದರ್ಶಿ ಬಸ್ಸಿ ಆನಂದ್ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಶೇಖರ್ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ.