ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಇಂದು(ಸೆಪ್ಟೆಂಬರ್ 09) ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅರೆಸ್ಟ್ ಮಾಡಿದೆ.
ಅಕ್ರಮ ಅದಿರು ಸಾಗಾಟ ಪ್ರಕರಣ ಸಂಬಂಧ ಇದೇ ಆಗಸ್ಟ್ 13, 14 ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶಾಸಕ ಸತೀಶ್ ಸೈಲ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಕೋಟ್ಯಾಂತರ ರೂಪಾಯಿ ಹಣ ಹಾಗೂ ಚಿನ್ನವನ್ನು ವಶಪಡಿಸಿಕೊಂಡಿದ್ದರು.