October 9, 2026
Friday, October 9, 2026
spot_img

ವರುಣನ ವಾರ್ನಿಂಗ್‌ಗೆ ಕಾಸರಗೋಡು ತತ್ತರ: ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 9 (ಮಂಗಳವಾರ) ರಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ರೆಡ್ ಅಲರ್ಟ್ ಹಿನ್ನೆಲೆ ಜಿಲ್ಲಾಡಳಿತದ ಮುನ್ನೆಚ್ಚರಿಕೆ ಕ್ರಮ

ಭಾರತೀಯ ಹವಾಮಾನ ಇಲಾಖೆ (IMD) ಕಾಸರಗೋಡು ಜಿಲ್ಲೆಗೆ ರೆಡ್ ಅಲರ್ಟ್ ನೀಡಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿಗಳ ಆದೇಶದಂತೆ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಟ್ಯೂಷನ್ ಕೇಂದ್ರಗಳು, ಐಜಿಎನ್‌ಒಯು ಅಧ್ಯಯನ ಕೇಂದ್ರಗಳು, ಐಸಿಎಸ್ಇ ಮತ್ತು ಸಿಬಿಎಸ್ಇ ಶಾಲೆಗಳು ಹಾಗೂ ಮದರಸಾಗಳಿಗೆ ರಜೆ ಅನ್ವಯವಾಗಲಿದೆ. ಆದರೆ ವಸತಿ ಶಾಲೆಗಳಿಗೆ (ರೆಸಿಡೆನ್ಶಿಯಲ್ ಸ್ಕೂಲ್‌ಗಳು) ಈ ರಜೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ:

ಪರೀಕ್ಷೆಗಳಿಗೆ ರಜೆ ಅನ್ವಯವಿಲ್ಲ; ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ

ಇದೇ ವೇಳೆ ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಪರೀಕ್ಷೆಗಳು, ಸಾರ್ವಜನಿಕ ಪರೀಕ್ಷೆಗಳು ಹಾಗೂ ಸಂದರ್ಶನಗಳು ಯಥಾಸ್ಥಿತಿಯಲ್ಲಿ ನಡೆಯಲಿದ್ದು, ಅವುಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Must Read