Tuesday, March 28, 2023

Latest Posts

ಕಾಸರಗೋಡು: ಯಂತ್ರಕ್ಕೆ ಸಿಲುಕಿ ಮಹಿಳೆ ದಾರುಣ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚೂಡಿದಾರ್ ನ ಶಾಲು ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಮಂಜೇಶ್ವರ ತೂಮಿನಾಡಿನಲ್ಲಿ ನಡೆದಿದೆ.

ಕುಂಜತ್ತೂರು ಸರಕಾರಿ ಹೈಸ್ಕೂಲ್ ಸಮೀಪದ ನಿವಾಸಿ ಜಯಶೀಲ (24) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ತೂಮಿನಾಡುನಲ್ಲಿರುವ ಬೇಕರಿಯೊಂದರ ಕಾರ್ಮಿಕೆಯಾಗಿದ್ದು, ಎಂದಿನಂತೆ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಯಂತ್ರಕ್ಕೆ ಚೂಡಿದಾರ್ ಶಾಲು ಸಿಲುಕಿ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಜಯಶೀಲರನ್ನು ಅಲ್ಲಿದ್ದವರು ಆಸ್ಪತ್ರೆಗೆ ಸಾಗಿಸಿದರೂ ಜೀವ ಉಳಿಸಲಾಗಲಿಲ್ಲ. ಒಂದೂವರೆ ವರ್ಷಗಳ ಹಿಂದೆ ವಿವಾಹವಾಗಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಜೇಶ್ವರ ತಾಲೂಕು ಆಸ್ಪತ್ರೆಯಲ್ಲಿರಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!