spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜು.19ರಿಂದ ಕಾಸರಗೋಡು -ಮಂಗಳೂರು ನಡುವೆ ಕೆಎಸ್‌ಆರ್‌ಟಿಸಿ, ಖಾಸಗಿ ಬಸ್ ಸಂಚಾರಕ್ಕೆ ಷರತ್ತುಬದ್ದ ಅನುಮತಿ: ದ.ಕ. ಜಿಲ್ಲಾಧಿಕಾರಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ವರದಿ, ಮಂಗಳೂರು:

ಕಾಸರಗೋಡು – ಮಂಗಳೂರು ನಡುವೆ ಜು.19ರಿಂದ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ಸಂಚಾರಕ್ಕೆ ಷರತ್ತುಬದ್ದ ಅನುಮತಿ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಕೇರಳ ರಾಜ್ಯದಿಂದ ಮಂಗಳೂರಿಗೆ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುವವರ ಕೋವಿಡ್ ಲಸಿಕೆಯ ಒಂದು ಡೋಸ್ ಪಡೆದಿರುವ ದಾಖಲೆ ಅಥವಾ 72 ಗಂಟೆಗಳ ಒಳಗಿನ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಆಯಾ ಬಸ್‌ನ ನಿರ್ವಾಹಕರು ಖಚಿತಪಡಿಸಿಕೊಳ್ಳಬೇಕು. ಮಾಸ್ಕ್, ಸ್ಯಾನಿಟೈಸರ್ ಬಳಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ ವ್ಯವಹಾರ ಸೇರಿದಂತೆ ವಿವಿಧ ಕಾರಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಮಾಡುತ್ತಿರುವ ಕಾರಣ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss