Wednesday, August 17, 2022

Latest Posts

ಕಾಸರಕೋಡ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ: 6 ಮಂದಿ ಮೀನುಗಾರರ ರಕ್ಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಹೊನ್ನಾವರ:

ಮೀನುಗಾರಿಕೆಗೆಂದು ತೆರಳಿದ್ದ ಬೋಟ್ ಕಾಸರಕೋಡ ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾಗಿದ್ದು, 6 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.
ಕುಂದಾಪುರ ಮೂಲದ ಶ್ರೀ ಕೃಷ್ಣ ಭಂಡಾರಿ ಹೆಸರಿನ ಶಿವರಾಮ ಶ್ರೀಯಾನ್ ಮಾಲಕತ್ವದ ಬೋಟ್ ಇದಾಗಿದ್ದು, ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗಾಗಿ ಬೋಟ್ ತೆರಳಿತ್ತು. ಮೀನುಗಾರಿಕೆ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೋಟ್ ಮುಳುಗಡೆ ಪರಿಣಾಮ ಬೋಟ್ ಎಂಜಿನ್ ಮತ್ತು ಪರಿಕರಗಳು ಸಂಪೂರ್ಣ ಹಾನಿಯಾಗಿದ್ದು, ಸುಮಾರು 28 ಲ.ರೂ. ಹಾನಿಯಾಗಿರುವುದಾಗಿ ವರದಿಯಾಗಿದೆ.
ಕಾಸರಕೋಡ ಟೊಂಕಾ ಪ್ರದೇಶದಲ್ಲಿ ಬೋಟ್ ಬರುತ್ತಿದ್ದಾಗ ತೀವ್ರ ಗಾಳಿ ಮತ್ತು ಅಲೆಯ ರಭಸಕ್ಕೆ ಬೋಟ್ ಮುಳುಗಿದೆ ಎನ್ನಲಾಗಿದೆ. ಇನ್ನು ಅಳಿವೆ ಪ್ರದೇಶದಲ್ಲಿ ಹೂಳು ತುಂಬಿದ್ದು ಬೋಟ್ ನೆಲ ಕಚ್ಚಿ ಹಾನಿಗೀಡಾಗಿದೆ. ಬೋಟ್ ಮುಳುಗುತ್ತಿದ್ದಂತೆ ಎಚ್ಚೆತ್ತುಕೊಂಡ ಮೀನುಗಾರರು ಬೋಟ್‍ನಿಂದ ನೀರಿಗೆ ಹಾರಿ ದಡ ಸೇರಲು ಮುಂದಾಗಿದ್ದಾರೆ. ಈ ವೇಳೆ ಅವರನ್ನು ಕಂಡ ಸ್ಥಳೀಯ ಮೀನುಗಾರರು ಹಾಗೂ ಕರಾವಳಿ ಕಾವಲು ಪಡೆಯ ಪೊಲೀಸರು ರಕ್ಷಣೆ ಮಾಡಿ ಸಹಾಯ ಮಾಡಿದ್ದಾರೆ.
ಬೋಟ್ ಸಮುದ್ರದಲ್ಲಿ ಮುಳುಗುತ್ತಿರುವ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ. ಬೋಟಿನಲ್ಲಿದ್ದ ಮೀನುಗಾರರು ಮೂಲತಃ ಕುಂದಾಪುರದವರು ಎಂಬ ಮಾಹಿತಿ ಲಭ್ಯವಾಗಿದ್ದು, ಸದ್ಯ ಎಲ್ಲಾ ಮೀನುಗಾರರು ಸುರಕ್ಷಿತವಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!