Sunday, August 14, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 117 ಜನರಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಗುರುವಾರ 117 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಪೈಕಿ 109 ಜನರಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 122 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 2133 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಇದರಲ್ಲಿ 1862 ಮಂದಿಗೆ ಸಂಪರ್ಕದ ಮೂಲಕ ಸೋಂಕು ತಗಲಿದೆ. ರಾಜ್ಯದಲ್ಲಿ 3753 ಜನರು ಗುಣಮುಖರಾದರು.
ಕಲ್ಲಿಕೋಟೆ ಜಿಲ್ಲೆಯಲ್ಲಿ 261, ಪತ್ತನಂತ್ತಿಟ್ಟ 206, ಎರ್ನಾಕುಳಂ 205, ಕಣ್ಣೂರು 200, ಕೋಟ್ಟಾಯಂ 188, ಮಲಪ್ಪುರಂ 179, ತೃಶೂರು 172, ಆಲಪ್ಪುಳ 168, ಕೊಲ್ಲಂ 152, ಕಾಸರಗೋಡು 117, ತಿರುವನಂತಪುರ 116, ಪಾಲಕ್ಕಾಡು 88, ಇಡುಕ್ಕಿ 46, ವಯನಾಡು ಜಿಲ್ಲೆಯಲ್ಲಿ 35 ಜನರಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಈ ಮಧ್ಯೆ ಕೋವಿಡ್ ಸೋಂಕು ಬಾಧಿಸಿ ಕೇರಳದಲ್ಲಿ ಗುರುವಾರ 13 ಮಂದಿ ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss