Wednesday, August 10, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 510 ಮಂದಿಗೆ ಕೊರೋನಾ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಬುಧವಾರ 510 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 500 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 472 ಮಂದಿ ಸೋಂಕುಮುಕ್ತರಾದರು. ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ ಓರ್ವ ಬಲಿಯಾಗಿದ್ದು , ಈ ಮೂಲಕ ಇದುವರೆಗೆ ಒಟ್ಟು 479 ಜನರು ಸಾವಿಗೀಡಾದರು. ಕೇರಳದಲ್ಲಿ ಹೊಸದಾಗಿ 30,196 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಇದರಲ್ಲಿ 28,617 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 27,579 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ತೃಶೂರು ಜಿಲ್ಲೆಯಲ್ಲಿ 3832, ಎರ್ನಾಕುಳಂ 3611, ಕಲ್ಲಿಕೋಟೆ 3058, ತಿರುವನಂತಪುರ 2900, ಕೊಲ್ಲಂ 2717, ಮಲಪ್ಪುರಂ 2580, ಪಾಲಕ್ಕಾಡು 2288, ಕೋಟ್ಟಾಯಂ 2214, ಆಲಪ್ಪುಳ 1645, ಕಣ್ಣೂರು 1433, ಇಡುಕ್ಕಿ 1333, ಪತ್ತನಂತ್ತಿಟ್ಟ 1181, ವಯನಾಡು 894, ಕಾಸರಗೋಡು ಜಿಲ್ಲೆಯಲ್ಲಿ 510 ಜನರಿಗೆ ಕೊರೋನಾ ಸೋಂಕು ದೃಢಗೊಂಡಿದೆ. ಈ ಮಧ್ಯೆ ಕೇರಳದಲ್ಲಿ ಬುಧವಾರ ಕೋವಿಡ್ ವೈರಸ್ ಬಾಧಿಸಿ 181 ಮಂದಿ ಅಸುನೀಗಿದರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 22,001 ಜನರು ಮೃತಪಟ್ಟರು. ಕೇರಳದಲ್ಲಿ ಬುಧವಾರ ಕೊರೋನಾ ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ಶೇಕಡಾ 17.63 ರಷ್ಟು ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss