ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 552 ಮಂದಿಗೆ ಕೊರೋನಾ ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 552 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 501 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 807 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 51,887 ಹೊಸ ಪ್ರಕರಣ

ಕೇರಳದಲ್ಲಿ ಮಂಗಳವಾರ ಹೊಸದಾಗಿ 51,887 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 47,612 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 40,383 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 24 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಂಗಳವಾರ ಶೇಕಡಾ 42.86 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!