Wednesday, August 17, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 657 ಮಂದಿಗೆ ಕೊರೋನಾ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 657 ಮಂದಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಈ ಪೈಕಿ 641 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 320 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 14,539 ಜನರಿಗೆ ಕೊರೋನಾ ಪಾಸಿಟಿವ್ ಆಗಿದೆ. ಇದರಲ್ಲಿ 13,582 ಮಂದಿಗೆ ಸಂಪರ್ಕದಿಂದ ವೈರಸ್ ತಗಲಿದೆ. ರಾಜ್ಯದಲ್ಲಿ 10,331 ಜನರು ಸೋಂಕುಮುಕ್ತರಾದರು.
ಕೇರಳ ರಾಜ್ಯದ ಜಿಲ್ಲೆಗಳ ಪೈಕಿ ಮಲಪ್ಪುರಂ ಜಿಲ್ಲೆಯಲ್ಲಿ 2115, ಎರ್ನಾಕುಳಂ 1624, ಕೊಲ್ಲಂ 1404, ತೃಶೂರು 1364, ಕಲ್ಲಿಕೋಟೆ 1359, ಪಾಲಕ್ಕಾಡು 1191, ತಿರುವನಂತಪುರ 977, ಕಣ್ಣೂರು 926, ಆಲಪ್ಪುಳ 871, ಕೋಟ್ಟಾಯಂ 826, ಕಾಸರಗೋಡು 657, ಪತ್ತನಂತ್ತಿಟ್ಟ 550, ವಯನಾಡು 436, ಇಡುಕ್ಕಿ ಜಿಲ್ಲೆಯಲ್ಲಿ 239 ಜನರಿಗೆ ಕೋವಿಡ್ ವೈರಸ್ ದೃಢಗೊಂಡಿದೆ. ಈ ಮಧ್ಯೆ ಕೊರೋನಾ ಸೋಂಕು ಬಾಧಿಸಿ ಕೇರಳದಲ್ಲಿ ಮಂಗಳವಾರ 124 ಮಂದಿ ಸಾವಿಗೀಡಾದರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 14,810 ಜನರು ಮರಣ ಹೊಂದಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!