Thursday, August 11, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 726 ಮಂದಿಗೆ ಕೊರೋನಾ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶುಕ್ರವಾರ 726 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 706 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 612 ಮಂದಿ ಸೋಂಕುಮುಕ್ತರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 13,750 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಲ್ಲಿ 12,884 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 10,697 ಜನರು ಗುಣಮುಖರಾದರು.
ಕೇರಳ ರಾಜ್ಯದ ಜಿಲ್ಲೆಗಳ ಪೈಕಿ ಕಲ್ಲಿಕೋಟೆ ಜಿಲ್ಲೆಯಲ್ಲಿ 1782, ಮಲಪ್ಪುರಂ 1763, ತೃಶೂರು 1558, ಎರ್ನಾಕುಳಂ 1552, ಕೊಲ್ಲಂ 1296, ತಿರುವನಂತಪುರ 1020, ಪಾಲಕ್ಕಾಡು 966, ಕೋಟ್ಟಾಯಂ 800, ಆಲಪ್ಪುಳ 750, ಕಾಸರಗೋಡು 726, ಕಣ್ಣೂರು 719, ಪತ್ತನಂತ್ತಿಟ್ಟ 372, ವಯನಾಡು 345, ಇಡುಕ್ಕಿ ಜಿಲ್ಲೆಯಲ್ಲಿ 301 ಜನರಿಗೆ ಕೋವಿಡ್ ಸೋಂಕು ದೃಢಗೊಂಡಿದೆ. ಈ ಮಧ್ಯೆ ಕೇರಳದಲ್ಲಿ ಶುಕ್ರವಾರ ಕೊರೋನಾ ವೈರಸ್ ಬಾಧಿಸಿ 130 ಮಂದಿ ಸಾವಿಗೀಡಾದರು. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 15,155 ಜನರು ಮರಣ ಹೊಂದಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss