Thursday, August 11, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 92 ಮಂದಿಗೆ ಗುಣಮುಖ: 48 ಜನರಿಗೆ ಕೊರೋನಾ ಸೋಂಕು

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಸೋಮವಾರ 48 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 45 ಜನರಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 92 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 1412 ಜನರಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 1252 ಮಂದಿಗೆ ಸಂಪರ್ಕದ ಮೂಲಕ ಸೋಂಕು ತಗಲಿದೆ. ರಾಜ್ಯದಲ್ಲಿ 3030 ಜನರು ಗುಣಮುಖರಾದರು.
ಕಲ್ಲಿಕೋಟೆ ಜಿಲ್ಲೆಯಲ್ಲಿ 245, ಕೊಲ್ಲಂ 141, ತಿರುವನಂತಪುರ 139, ಎರ್ನಾಕುಳಂ 138, ಮಲಪ್ಪುರಂ 132, ಇಡುಕ್ಕಿ 104, ತೃಶೂರು 90, ಕಣ್ಣೂರು 82, ಕೋಟ್ಟಾಯಂ 80, ಆಲಪ್ಪುಳ 79, ಪಾಲಕ್ಕಾಡು 55, ಕಾಸರಗೋಡು 48, ಪತ್ತನಂತ್ತಿಟ್ಟ 48, ವಯನಾಡು ಜಿಲ್ಲೆಯಲ್ಲಿ 31 ಜನರಿಗೆ ಕೋವಿಡ್ ಸೋಂಕು ದೃಢಗೊಂಡಿದೆ. ಈ ಮಧ್ಯೆ ಕೊರೋನಾ ವೈರಸ್ ಬಾಧಿಸಿ ಕೇರಳದಲ್ಲಿ ಸೋಮವಾರ 12 ಮಂದಿ ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss