Wednesday, August 17, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 963 ಮಂದಿಗೆ ಕೊರೋನಾ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 963 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 931 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 110 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 37,290 ಜನರಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 34,256 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 32,978 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ಮಲಪ್ಪುರಂ ಜಿಲ್ಲೆಯಲ್ಲಿ 4774, ಎರ್ನಾಕುಳಂ 4514, ಕಲ್ಲಿಕೋಟೆ 3927, ತಿರುವನಂತಪುರ 3700, ತೃಶೂರು 3282, ಪಾಲಕ್ಕಾಡು 2959, ಕೊಲ್ಲಂ 2888, ಕೋಟ್ಟಾಯಂ 2566, ಆಲಪ್ಪುಳ 2460, ಕಣ್ಣೂರು 2085, ಪತ್ತನಂತ್ತಿಟ್ಟ 1224, ಇಡುಕ್ಕಿ 1056, ಕಾಸರಗೋಡು 963, ವಯನಾಡು ಜಿಲ್ಲೆಯಲ್ಲಿ 892 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮಧ್ಯೆ ಕೋವಿಡ್ ವೈರಸ್ ಬಾಧಿಸಿ ಕೇರಳದಲ್ಲಿ ಮಂಗಳವಾರ 79 ಮಂದಿ ಅಸುನೀಗಿದರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 5958 ಜನರು ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!