Wednesday, July 6, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 158 ಮಂದಿಗೆ ಕೋವಿಡ್ ಸೋಂಕು ದೃಢ, 61 ಜನರಿಗೆ ಗುಣಮುಖ

ಹೊಸ ದಿಗಂತ ವರದಿ, ಕಾಸರಗೋಡು:

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 158 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಪೈಕಿ 143 ಜನರಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 61 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 8126 ಜನರಿಗೆ ಕೋವಿಡ್ ವೈರಸ್ ದೃಢಗೊಂಡಿದೆ. ಇದರಲ್ಲಿ 7226 ಮಂದಿಗೆ ಸಂಪರ್ಕದ ಮೂಲಕ ಸೋಂಕು ತಗಲಿದೆ. ರಾಜ್ಯದಲ್ಲಿ 2700 ಜನರು ಗುಣಮುಖರಾದರು.
ಎರ್ನಾಕುಳಂ ಜಿಲ್ಲೆಯಲ್ಲಿ 1267, ಕಲ್ಲಿಕೋಟೆ 1062, ತಿರುವನಂತಪುರ 800, ಕೋಟ್ಟಾಯಂ 751, ಮಲಪ್ಪುರಂ 744, ತೃಶೂರು 704, ಕಣ್ಣೂರು 649, ಪಾಲಕ್ಕಾಡು 481, ಕೊಲ್ಲಂ 399, ಪತ್ತನಂತ್ತಿಟ್ಟ 395, ಆಲಪ್ಪುಳ 345, ಇಡುಕ್ಕಿ 205, ವಯನಾಡು 166, ಕಾಸರಗೋಡು ಜಿಲ್ಲೆಯಲ್ಲಿ 158 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಈ ಮಧ್ಯೆ ಕೇರಳದಲ್ಲಿ ಗುರುವಾರ ಕೋವಿಡ್ ಸೋಂಕು ಬಾಧಿಸಿ 20 ಮಂದಿ ಮೃತಪಟ್ಟರು. ಈ ಮೂಲಕ ಇದುವರೆಗೆ ರಾಜ್ಯದ ಒಟ್ಟು ಸಾವಿನ ಸಂಖ್ಯೆ 4856 ಆಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss