Friday, July 1, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ ಸಾವಿರದ ಗಡಿ ದಾಟಿದ ಕೊರೋನಾ ಪಾಸಿಟಿವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸ ದಿಗಂತ ವರದಿ, ಕಾಸರಗೋಡು:

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ ಬರೋಬ್ಬರಿ 1006 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 975 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 93 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 35,636 ಜನರಿಗೆ ಕೊರೋನಾ ಸೋಂಕು ದೃಢಗೊಂಡಿದೆ. ಇದರಲ್ಲಿ 33,196 ಮಂದಿಗೆ ಸಂಪರ್ಕದಿಂದ ವೈರಸ್ ತಗಲಿದೆ. ರಾಜ್ಯದಲ್ಲಿ 15,493 ಜನರು ಗುಣಮುಖರಾದರು.
ಕಲ್ಲಿಕೋಟೆ ಜಿಲ್ಲೆಯಲ್ಲಿ 5554, ಎರ್ನಾಕುಳಂ 5002, ತೃಶೂರು 4070, ಮಲಪ್ಪುರಂ 3354, ತಿರುವನಂತಪುರ 3111, ಆಲಪ್ಪುಳ 2536, ಕೋಟ್ಟಾಯಂ 2515, ಪಾಲಕ್ಕಾಡು 2499, ಕೊಲ್ಲಂ 1648, ಕಣ್ಣೂರು 1484, ಪತ್ತನಂತ್ತಿಟ್ಟ 1065, ಕಾಸರಗೋಡು 1006, ಇಡುಕ್ಕಿ 987, ವಯನಾಡು ಜಿಲ್ಲೆಯಲ್ಲಿ 814 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮಧ್ಯೆ ಕೋವಿಡ್ ವೈರಸ್ ಬಾಧಿಸಿ ಕೇರಳದಲ್ಲಿ ಶನಿವಾರ 49 ಮಂದಿ ಮೃತಪಟ್ಟರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 5356 ಜನರು ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss