ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 147 ಮಂದಿಗೆ ಕೊರೋನಾ ಸೋಂಕು ದೃಢ

ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಭಾನುವಾರ 147 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 136 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 38 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಇಬ್ಬರು ಸಾವಿಗೀಡಾದರು.

ಕೇರಳದಲ್ಲಿ 6238 ಹೊಸ ಪ್ರಕರಣ

ಕೇರಳದಲ್ಲಿ ಭಾನುವಾರ ಹೊಸದಾಗಿ 6238 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 5776 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 2390 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 30 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶನಿವಾರ ಶೇಕಡಾ 8.10 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!