Thursday, July 7, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 644 ಮಂದಿಗೆ ಕೊರೋನಾ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಭಾನುವಾರ 644 ಮಂದಿಗೆ ಕೋವಿಡ್ ವೈರಸ್ ದೃಢಗೊಂಡಿದೆ. ಈ ಪೈಕಿ 632 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 625 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 17,466 ಜನರಿಗೆ ಕೊರೋನಾ ಪಾಸಿಟಿವ್ ಆಗಿದೆ. ಇದರಲ್ಲಿ 16,662 ಮಂದಿಗೆ ಸಂಪರ್ಕದಿಂದ ವೈರಸ್ ತಗಲಿದೆ. ರಾಜ್ಯದಲ್ಲಿ 15,247 ಜನರು ಸೋಂಕುಮುಕ್ತರಾದರು.
ಕೇರಳದ ಜಿಲ್ಲೆಗಳ ಪೈಕಿ ಮಲಪ್ಪುರಂ ಜಿಲ್ಲೆಯಲ್ಲಿ 2684, ಕಲ್ಲಿಕೋಟೆ 2379, ತೃಶೂರು 2190, ಎರ್ನಾಕುಳಂ 1687, ಪಾಲಕ್ಕಾಡು 1552, ಕೊಲ್ಲಂ 1263, ತಿರುವನಂತಪುರ 1222, ಆಲಪ್ಪುಳ 914, ಕಣ್ಣೂರು 884, ಕೋಟ್ಟಾಯಂ 833, ಕಾಸರಗೋಡು 644, ಪತ್ತನಂತ್ತಿಟ್ಟ 478, ವಯನಾಡು 383, ಇಡುಕ್ಕಿ ಜಿಲ್ಲೆಯಲ್ಲಿ 353 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಈ ಮಧ್ಯೆ ಕೊರೋನಾ ಬಾಧಿಸಿ ಕೇರಳದಲ್ಲಿ ಭಾನುವಾರ 66 ಮಂದಿ ಅಸುನೀಗಿದರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 16,035 ಜನರು ಮರಣ ಹೊಂದಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss