Saturday, June 25, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಇಂದು 643 ಮಂದಿಗೆ ಕೊರೋನಾ ಸೋಂಕು: 503 ಜನರು ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………

ಹೊಸದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 643 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಪೈಕಿ 616 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 503 ಮಂದಿ ಸೋಂಕುಮುಕ್ತರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 16,848 ಜನರಿಗೆ ಕೋವಿಡ್ ವೈರಸ್ ದೃಢಗೊಂಡಿದೆ. ಇದರಲ್ಲಿ 15,855 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 12,052 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ಮಲಪ್ಪುರಂ ಜಿಲ್ಲೆಯಲ್ಲಿ 2752, ತೃಶೂರು 1929, ಎರ್ನಾಕುಳಂ 1901, ಕಲ್ಲಿಕೋಟೆ 1689, ಕೊಲ್ಲಂ 1556, ಪಾಲಕ್ಕಾಡು 1237, ಕೋಟ್ಟಾಯಂ 1101, ತಿರುವನಂತಪುರ 1055, ಆಲಪ್ಪುಳ 905, ಕಣ್ಣೂರು 873, ಕಾಸರಗೋಡು 643, ಪತ್ತನಂತ್ತಿಟ್ಟ 517, ವಯನಾಡು 450, ಇಡುಕ್ಕಿ ಜಿಲ್ಲೆಯಲ್ಲಿ 240 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮಧ್ಯೆ ಕೇರಳದಲ್ಲಿ ಮಂಗಳವಾರ ಕೋವಿಡ್ ವೈರಸ್ ಬಾಧಿಸಿ 104 ಮಂದಿ ಅಸುನೀಗಿದರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 15,512 ಜನರು ಮರಣ ಹೊಂದಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss