Tuesday, August 16, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 89 ಜನರಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶನಿವಾರ 89 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 77 ಜನರಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 95 ಮಂದಿ ಗುಣಮುಖರಾದರು. ಈ ಮಧ್ಯೆ ಕೇರಳದಲ್ಲಿ 2791 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಲ್ಲಿ 2535 ಮಂದಿಗೆ ಸಂಪರ್ಕದ ಮೂಲಕ ಸೋಂಕು ತಗಲಿದೆ. ರಾಜ್ಯದಲ್ಲಿ 3517 ಜನರು ಗುಣಮುಖರಾದರು.
ಕಲ್ಲಿಕೋಟೆ ಜಿಲ್ಲೆಯಲ್ಲಿ 376, ಕೊಲ್ಲಂ 299, ಮಲಪ್ಪುರಂ 286, ಎರ್ನಾಕುಳಂ 237, ತೃಶೂರು 231, ಕೋಟ್ಟಾಯಂ 223, ಪತ್ತನಂತ್ತಿಟ್ಟ 222, ಕಣ್ಣೂರು 215, ಆಲಪ್ಪುಳ 206, ತಿರುವನಂತಪುರ 188, ಪಾಲಕ್ಕಾಡು 102, ಕಾಸರಗೋಡು 89, ವಯನಾಡು 61, ಇಡುಕ್ಕಿ ಜಿಲ್ಲೆಯಲ್ಲಿ 56 ಜನರಿಗೆ ಕೋವಿಡ್ ಸೋಂಕು ದೃಢಗೊಂಡಿದೆ. ಇದೇ ವೇಳೆ ಕೊರೋನಾ ವೈರಸ್ ಬಾಧಿಸಿ ಕೇರಳದಲ್ಲಿ ಶನಿವಾರ 16 ಮಂದಿ ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss