Monday, August 8, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 125 ಜನರಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 125 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ 115 ಜನರಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 149 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 2776 ಜನರಿಗೆ ಕೊರೋನಾ ಪಾಸಿಟಿವ್ ಆಗಿದೆ. ಇದರಲ್ಲಿ 2504 ಮಂದಿಗೆ ಸಂಪರ್ಕದ ಮೂಲಕ ವೈರಸ್ ತಗಲಿದೆ. ರಾಜ್ಯದಲ್ಲಿ 3638 ಜನರು ಗುಣಮುಖರಾದರು.
ಕಲ್ಲಿಕೋಟೆ ಜಿಲ್ಲೆಯಲ್ಲಿ 358, ಮಲಪ್ಪುರಂ 298, ಎರ್ನಾಕುಳಂ 291, ತೃಶೂರು 283, ಕೊಲ್ಲಂ 232, ಆಲಪ್ಪುಳ 207, ತಿರುವನಂತಪುರ 190, ಕೋಟ್ಟಾಯಂ 185, ಪತ್ತನಂತ್ತಿಟ್ಟ 183, ಕಣ್ಣೂರು 175, ಕಾಸರಗೋಡು 125, ಇಡುಕ್ಕಿ 93, ಪಾಲಕ್ಕಾಡು 89, ವಯನಾಡು ಜಿಲ್ಲೆಯಲ್ಲಿ 67 ಜನರಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಈ ಮಧ್ಯೆ ಕೋವಿಡ್ ಸೋಂಕು ಬಾಧಿಸಿ ಕೇರಳದಲ್ಲಿ ಶುಕ್ರವಾರ 16 ಮಂದಿ ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss